(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.8. ಮಾಜಿ ದೇವದಾಸಿ ಮಕ್ಕಳಿಗೆ ಶಾಲಾ ದಾಖಲಾತಿ ಅರ್ಜಿಯಲ್ಲಿ ತಂದೆ ಹೆಸರು ಕಡ್ಡಾಯವಾಗಿರದೆ ಐಚ್ಛಿಕವಾಗಿಸಲು ಕ್ರಮ ವಹಿಸಲಾಗಿದೆ, ಈ ಮಕ್ಕಳಿಗೆ ಶಿಕ್ಷಣದಲ್ಲಿ ಶೇ. 5ರಷ್ಟು ಒಳಮೀಸಲಾತಿ ಕಲ್ಪಿಸಲು ಬರುವ ಅಧಿವೇಶನದಲ್ಲಿ ಚರ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ದೇವದಾಸಿ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರುವ ದೃಷ್ಟಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚು ಅವಕಾಶ ನೀಡಲು ಶೇ. 5ರಷ್ಟು ಒಳಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಜತೆಗೆ ಉದ್ಯೋಗದಲ್ಲೂ ಮೀಸಲಾತಿ ಒದಗಿಸುವ ಬಗ್ಗೆ ಪ್ರಯತ್ನ ನಡೆಸಿದ್ದೇವೆ ಎಂದರು.