(ನ್ಯೂಸ್ ಕಡಬ)newskadaba.com ಟರ್ಕಿ, ಫೆ.09. ಭೀಕರವಾದ ಭೂಕಂಪದಿಂದ ನಡುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಮೃತಪಟ್ಟ ಸಂಖ್ಯೆ 15,000ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಮೃತಪಟ್ಟಿದ್ದಾರೆ, ಸಿರಿಯಾದಲ್ಲಿ 2,992 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಟರ್ಕಿ-ಸಿರಿಯಾ ಭೂಕಂಪದಿಂದ ಸಾವಿನ ಸಂಖ್ಯೆ 15,000 ದಾಟಿದ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ದೃಢಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿಗಳು ಭೂಕಂಪದಿಂದ ಉಂಟಾದ ವಿನಾಶದ ಪ್ರಮಾಣವನ್ನು ಹೆಚ್ಚಿಸಿವೆ ಎಂದು ಅವರು ಹೇಳಿದ್ದಾರೆ.
ಈ ನಡುವೆ ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುರೆಸಿದ್ದಾರೆ. ಆದರೆ, ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ ಎಂದು ವರದಿಯಾಗಿದೆ.