ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಬಲ ಭೂಕಂಪಕ್ಕೆ ನಡುಗಿದ ಟರ್ಕಿ-ಸಿರಿಯಾ ➤ ದಿನೇ ದಿನೇ ಹೆಚ್ಚುತ್ತಿರುವ ಮೃತರ ಸಂಖ್ಯೆ – News Kadaba

ಪ್ರಬಲ ಭೂಕಂಪಕ್ಕೆ ನಡುಗಿದ ಟರ್ಕಿ-ಸಿರಿಯಾ ➤ ದಿನೇ ದಿನೇ ಹೆಚ್ಚುತ್ತಿರುವ ಮೃತರ ಸಂಖ್ಯೆ

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.09. ಭೀಕರವಾದ ಭೂಕಂಪದಿಂದ ನಡುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಮೃತಪಟ್ಟ ಸಂಖ್ಯೆ 15,000ಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಮೃತಪಟ್ಟಿದ್ದಾರೆ, ಸಿರಿಯಾದಲ್ಲಿ 2,992  ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಟರ್ಕಿ-ಸಿರಿಯಾ ಭೂಕಂಪದಿಂದ ಸಾವಿನ ಸಂಖ್ಯೆ 15,000 ದಾಟಿದ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ದೃಢಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿಗಳು ಭೂಕಂಪದಿಂದ ಉಂಟಾದ ವಿನಾಶದ ಪ್ರಮಾಣವನ್ನು ಹೆಚ್ಚಿಸಿವೆ ಎಂದು ಅವರು ಹೇಳಿದ್ದಾರೆ.

ಈ ನಡುವೆ ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುರೆಸಿದ್ದಾರೆ. ಆದರೆ, ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ ಎಂದು ವರದಿಯಾಗಿದೆ.

 

Scroll to Top