ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆಸ್ಟ್ರೇಲಿಯಾ..!

(ನ್ಯೂಸ್ ಕಡಬ)newskadaba.com ನಾಗ್ಪುರ,ಫೆ.09. ಭಾರತ ಹಾಗೂ ಆಸ್ಟ್ರೇಲಿಯಾ  ಈ ಎರಡು ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಗೆ ಭರ್ಜರಿ ಚಾಲನೆ ಸಿಕ್ಕಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆರಂಭಿಸಿದೆ. ಮೊದಲು ಬ್ಯಾಟಿಂಗ್ ಮಾಡಲಿಳಿದ ಪ್ರವಾಸಿ ಆಸೀಸ್‌ ತಂಡಕ್ಕೆ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು  ಎಂದು ವರದಿಯಾಗಿದೆ.

2 ರನ್‌ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮೂರನೇ ವಿಕೆಟ್‌ಗೆ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಬುಶೇನ್ ಆಸರೆಯಾಗಿದ್ದಾರೆ. ಮೊದಲ ದಿನದಾಟದ ಲಂಚ್ ಬ್ರೇಕ್‌ ವೇಳೆಗೆ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ.

Also Read  ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ

 

error: Content is protected !!
Scroll to Top