ಶೈಕ್ಷಣಿಕ ಸಾಧನೆ ಉತ್ತಮ ಜೀವನಕ್ಕೆ ಬುನಾದಿ

(ನ್ಯೂಸ್ ಕಡಬ)newskadaba.com ಶಿರಹಟ್ಟಿ, ಫೆ.09. ಶೈಕ್ಷಣಿಕ ಕ್ರಿಯೆಯಲ್ಲಿ  ಭಾಗಿಯಾದ ವಿದ್ಯಾರ್ಥಿಗಳು ಬಹುಮುಖ ಪ್ರತಿಭಾವಂತರಾಗುತ್ತಾರೆ. ಸರಕಾರ ಕೊಡುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣವನ್ನು ಪಡೆದು ಉತ್ತಮ ನಾಗರಿಕರಾಗಬೇಕೆಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.


ಅವರು ಪಟ್ಟಣದ ಎಫ್.ಬಿ ಪೂಜಾರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳವನ್ನುಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಹಂತದಲ್ಲಿಯೇ ಮೌಲ್ಯಗಳನ್ನು ರೂಢಿಸಿಕೊಂಡು ದೇಶದ ಸಂಸ್ಕಾರಗಳನ್ನು ಉಳಿಸಿ ಬೆಳೆಸುವ ಪ್ರಜೆಗಳಾಗಬೇಕು. ಸ್ಪರ್ಧಾತ್ಮಕ ಜಗತ್ತಿಗೆ ಸರಿದೂಗುವ ಜ್ಞಾನವನ್ನು ಹೊಂದುವುದು ಅಗತ್ಯವಿದೆ.ಆದ್ದರಿಂದ ವಿದ್ಯಾರ್ಥಿಗಳು ಮೊಬೈಲಗಳ ಭರಾಟೆಯನ್ನು ಕಡಿಮೆ ಮಾಡಿಕೊಂಡು ಉತ್ತಮಕ್ಕಾಗಿ ಬಳಸಿ ಉತ್ತಮ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕೆಂದು ಹೇಳಿದರು.

Also Read  ಜನವರಿ 19ರಂದು ಮಂಗಳೂರಿಗೆ ಮುಖ್ಯಮಂತ್ರಿ ಆಗಮನ - ಪೂರ್ವಭಾವಿ ಸಭೆ

error: Content is protected !!
Scroll to Top