ಉಪ್ಪಿನಂಗಡಿ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ ► 80 ಕೆಜಿ ಗಾಂಜಾ ಸಹಿತ ಕಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.24. ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 80 ಕಿಲೋಗ್ರಾಂ ಗಾಂಜಾವನ್ನು ಪತ್ತೆಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಗಾಂಜಾ ಸಹಿತ ಕಾರನ್ನು ವಶಪಡಿಸಿಕೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಹೋಂಡಾ ಸಿಟಿ ಕಾರಿನಲ್ಲಿ ಸುಮಾರು ಆರು ಲಕ್ಷ ರೂ. ಮೌಲ್ಯದ 80 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಗಳು ಪೊಲೀಸರ ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Also Read  ಕಲ್ಲುಗುಡ್ಡೆ: ವಿದ್ಯುತ್ ತಂತಿಗಳಿಗೆ ತಾಗಿಕೊಂಡಿರುವ ಮರಗಳ ತೆರವು ➤ ಮೆಸ್ಕಾಂ ಸಿಬ್ಬಂದಿಗಳಿಗೆ ಸ್ಥಳೀಯರ ಸಾಥ್

error: Content is protected !!
Scroll to Top