➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.9. 9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ ಯಾಗಿದ್ದು,.ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ.

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.

Also Read  ಪ್ರಧಾನಮಂತ್ರಿ ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಸಿನಿಮಾ ಮಾಡುತ್ತಿರುವ ಸಾಧನೆಗಳನ್ನು ಸಂಭ್ರಮಿಸುತ್ತಿದ್ದಾರೆ. ಈ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲ ವಿದೇಶದಲ್ಲಿ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್​ ರೇಸ್​ನಲ್ಲಿದೆ.

 

error: Content is protected !!
Scroll to Top