(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10. ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದರು.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.