ಕಾಂತಾರ’  ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್



(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ‘ಕಾಂತಾರ’ ಕನ್ನಡ ಸಿನೆಮಾದಲ್ಲಿ ‘ವರಾಹರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯಿತಿ ನೀಡಿದೆ. ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ ಎಂದು  ವರದಿ ತಿಳಿಸಿದೆ.







‘ಕಾಂತಾರ’ ಚಿತ್ರದ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಹಾಡಿನ ಮೇಲೆ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ತನಿಖೆಗೆ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿಯವರುನ್ನು ಬಂಧಿಸಬಾರದೆಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.






 

 

error: Content is protected !!
Scroll to Top