ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿಷೇಧ ➤ಚಾಲಕರು, ಮಾಲೀಕರ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.  ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಟ್ರಾಕ್ಟರ್ ಚಾಲಕರು ಮತ್ತು ಮಾಲೀಕರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಇಂತಹ ವಾಹನಗಳ ಸಂಚಾರವನ್ನು ನಿಷೇಧಿಸಿರುವ ಬೆಂಗಳೂರು ಟ್ರಾಫಿಕ್ ಪೊಲೀಸರ ಆದೇಶವನ್ನು ವಿರೋಧಿಸಿ ಸುಮಾರು 3,000 ಟ್ರ್ಯಾಕ್ಟರ್ ಮಾಲೀಕರು ಮತ್ತು ಕಾರ್ಮಿಕರು ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ನಗರದಲ್ಲಿ 35,000 ಕ್ಕೂ ಹೆಚ್ಚು ಟ್ರ್ಯಾಕ್ಟರ್‌ಗಳಿದ್ದು, ಈ ನಿರ್ಬಂಧದಿಂದ ಸುಮಾರು ಎರಡು ಲಕ್ಷ ಕಾರ್ಮಿಕರು ತೊಂದರೆಗೀಡಾಗಿದ್ದಾರೆ ಎಂದು ಟ್ರ್ಯಾಕ್ಟರ್ ಮಾಲೀಕರ ಸಂಘ ತಿಳಿಸಿದೆ.  

Scroll to Top