ಮಾಜಿ ಸಚಿವ ಟಿ. ಜಾನ್ ವಿಧಿವಶ​

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.  ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಟಿ. ಜಾನ್ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಜಾನ್​ ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್‌ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದಲ್ಲಿ ಹೆಸರು ಮಾಡಿದ್ದರು.

ಮೂಲತಃ ಕೇರಳದವರಾದ ಟಿ.ಜಾನ್ ವರು  ಉದ್ಯಮದಲ್ಲಿ ತೊಡಗಿಕೊಂಡು ಹಂತ ಹಂತವಾಗಿ ಸಿರಿವಂತಿಕೆ ಪಡೆದುಕೊಂಡಿದ್ದರು. ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು. ಕಷ್ಟ ಹೇಳಿಕೊಂಡು ಯಾರೇ ಬಂದರು ಸಹಾಯಹಸ್ತ ಚಾಚುತ್ತಿದ್ದ ಟಿ.ಜಾನ್ ಅವರು ಕೊಡುಗೈ ದಾನಿಯೆಂದೇ ಖ್ಯಾತರಾಗಿದ್ದರು. ನಾಳೆ ಶನಿವಾರ  ಬೆಂಗಳೂರಿನಲ್ಲಿ ಟಿ.ಜಾನ್ ಅವರ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Also Read  JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ

 

 

error: Content is protected !!
Scroll to Top