(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ.25. ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಸಂವಿಧಾನವನ್ನು ಬದಲಾಯಿಸಲು ನಾವು ಬಂದಿದ್ದೇವೆ ಎಂದು ಹೇಳುವುದರ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಅವರು ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ವೇಳೆ, ಜಾತ್ಯಾತೀತರು ಎಂದರೆ ಯಾರೆಂದು ಗೊತ್ತಾಗುವುದಿಲ್ಲ. ಅಪ್ಪ ಅಮ್ಮನ ಗುರುತು ಇಲ್ಲದವರನ್ನು ಜಾತ್ಯಾತೀತರು ಎನ್ನಬಹುದು. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ ಸಂವಿಧಾನವು ಕಾಲಕ್ಕೆ ತಕ್ಕಂತೆ ಅದೆಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಬದಲಾಗುತ್ತೆ. ಆ ಸಂವಿಧಾನವನ್ನು ಬದಲಾಯಿಸೋದಿಕ್ಕೆ ಅಂತಾನೇ ನಾವು ಬಂದಿರೋದು ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ.
ಇನ್ನು ಇದೇ ವೇಳೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಈ ವಿವಾದಾತ್ಮಕ ಹೇಳಿಕೆಯು ಭಾರಿ ಟೀಕೆಗೆ ಒಳಗಾಗಿದ್ದು, ಸಚಿವರ ರಾಜೀನಾಮಗೆ ಒತ್ತಾಯಗಳು ಕೇಳಿ ಬರುತ್ತಿವೆ.