ಸರಣಿ ಅಪಘಾತ ➤ ಅದೃಷ್ಟವಶಾತ್  ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ  ಸಂಭವಿಸಿದ  ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ ಹಿಂದೆ ಬಂದ ಲಾರಿಯೊಂದು, ಗೂಡ್ಸ್ ಆಟೋವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂದಿನಿಂದ ಗೂಡ್ಸ್ ಆಟೋಗೆ ಅಪ್ಪಳಿಸಿದೆ. ನಿಯಂತ್ರಣ ಕಳೆದುಕೊಂಡ ಗೂಡ್ಸ್ ಆಟೋ ಬಸ್​ಗೆ ಡಿಕ್ಕಿ ಹೊಡೆದಿದೆ.

 

Scroll to Top