ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್ 

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.11. ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಅಭಿನಯಾ, ಅವರ ತಾಯಿ ಜಯಮ್ಮ ಹಾಗೂ ಅಣ್ಣ ಚೆಲುವರಾಜು ವಿರುದ್ಧ 2002ರಲ್ಲಿ ಪ್ರಕರಣ ದಾಖಲಾಗಿತ್ತು.

Also Read  ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು

ತನಿಖೆ ಕೈಗೊಂಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸುದಾಂಶು ದುಲಿಯಾ ನೇತೃತ್ವದ ಸುಪ್ರೀಂಕೋರ್ಟ್‌ನ ಪೀಠ, ಇವರಿಗೆ ಜಾಮೀನು ಮಂಜೂರು ಮಾಡಿದೆ. ಮುಂದಿನ 10 ದಿನಗಳ ಮಟ್ಟಿಗೆ ಅವರನ್ನು ಬಂಧಿಸದಂತೆ ಸೂಚನೆ ನೀಡಿದೆ. ಜೊತೆಗೆ, ಬೆಂಗಳೂರು ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ.

error: Content is protected !!
Scroll to Top