ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಹೋದಲ್ಲೆಲ್ಲಾ ಹೆಣ ಬೀಳುತ್ತಿದೆ ► ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ.25. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಎಲ್ಲೆಲ್ಲಿ ಪ್ರವಾಸ ಮಾಡುತ್ತಾರೋ ಅಲ್ಲಿ ಕೊಲೆ, ಅತ್ಯಾಚಾರ ಆಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಅವರು ಇತ್ತೀಚೆಗೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ವಿಜಯಪುರದ ಶಾಲಾ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ವಿಜಯಪುರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಹೊನ್ನಾವರಕ್ಕೆ ಹೋದರು ಪರೇಶ್‌ ಮೇಸ್ತನ ಹತ್ಯೆಯಾಯಿತು. ಇಲ್ಲಿಗೆ ಬಂದು ಹೋದ್ರು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ, ಒಬ್ಬ ಮುಖ್ಯಮಂತ್ರಿ ಜಿಲ್ಲೆಗೆ ಬಂದಾಗ ಜಿಲ್ಲಾಡಳಿತ, ಪೊಲೀಸರು ಜಿಲ್ಲೆಯನ್ನು ಬಿಗಿ ಹಿಡಿತದಲ್ಲಿ ಇಡಬೇಕಾಗಿತ್ತು. ಆದರೆ ಇಲ್ಲಿ ಕೊಲೆಗಡುಕರಿಗೆ, ಕಳ್ಳರಿಗೆ ಕುಮ್ಮಕ್ಕು ನೀಡುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ಕಡಬ: ಎ.ಕೆ. ಡಿಲಕ್ಸ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ ➤ ಸುಸಜ್ಜಿತ ಎಸಿ/ನಾನ್ ಎಸಿ ರೂಂಗಳು ಲಭ್ಯ

ವಿಜಯಪುರದಲ್ಲಿ ಗಾಂಜಾ ಮಾರಾಟ ಎಗ್ಗಿಲ್ಲದೆ ಸಾಗಿದೆ. ಪೊಲೀಸರು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ. ಈ ಬಾಲಕಿಯ ಶವ ಪತ್ತೆಯಾದ ಮನೆಯಲ್ಲಿ ಏನೆಲ್ಲ ಚಟುವಟಿಕೆಗಳು ನಡೆದಿವೆ ಎಂಬುದರ ಕುರಿತು ತನಿಖೆಯಾಗಬೇಕು, ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!
Scroll to Top