ಮೊಬೈಲ್‌ ಟವರ್‌ ಏರಿ ಕುಳಿತ ಕಾರ್ಮಿಕ

(ನ್ಯೂಸ್ ಕಡಬ) newskadaba.com ಧಾರವಾಡ, ಫೆ.11. ಜಲ ಮಂಡಳಿ ಗುತ್ತಿಗೆ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಜಲ ಮಂಡಳಿ ಗುತ್ತಿಗೆ ಕಾರ್ಮಿಕ ಮೊಬೈಲ್‌ ಟವರ್‌ ಏರಿ ಕುಳಿತ ಘಟನೆ  ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಜ್ಯುಬಲಿ ವೃತ್ತದ ಬಳಿವಿರುವ  ಮೊಬೈಲ್‌ ಟವರ್‌ ಏರಿ ಕುಳಿತ ಕಾರ್ಮಿಕ ಒಂದೆಡೆಯಾದರೆ, ಇನ್ನೊಂದೆಡೆ ಗುತ್ತಿಗೆ ಕಾರ್ಮಿಕರು ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಗಂಭೀರವಾಗಿ ಪರಿಗಣಿಸಿ ನಮ್ಮನ್ನು ಕೆಲಸಕ್ಕೆ ಮರಳಿ ಸೇರಿಸಿಕೊಳ್ಳಬೇಕು. ಇಲ್ಲದೇ  ಹೋದಲ್ಲಿ  ಮುಂದಿನ ದಿನಗಳಲ್ಲಿ ಇನ್ನಷ್ಟುಉಗ್ರ ಹೋರಾಟ ಹಾಗೂ ಅಸಹಕಾರ ಚಳವಳಿ ನಡೆಸುವುದಾಗಿ ಜಲ ಮಂಡಳಿ ಗುತ್ತಿಗೆ ಕಾರ್ಮಿಕರು ಎಚ್ಚರಿಕೆ ನೀಡಿದರು.

Also Read  ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ

 

error: Content is protected !!
Scroll to Top