ಕೈಗಾರಿಕೆಗಳಲ್ಲಿ ಶೇ 80 ರಷ್ಟು ಕನ್ನಡಿಗರಿಗೆ ಉದ್ಯೋಗ ➤ಶ್ರೀರಾಮುಲು‌

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ.11.  ನಗರದ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ, ಬಳ್ಳಾರಿ ತಾಲೂಕಿನ ಆರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಿ, ಮಾತನಾಡಿದವರು ಕನ್ನಡ ನಾಡು ನುಡಿಯನ್ನು ಮತ್ತಷ್ಟು ಶ್ರೀಮಂತಗೊಳಿಸ ಬೇಕಿದೆ ಅದು ಎಲ್ಲಾ ಕನ್ನಡಿಗರ ಕರ್ತವ್ಯ ಎಂದು  ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ರಾಜ್ಯದಲ್ಲಿನ ಉದ್ದಿಮೆಗಳಲ್ಲಿ ಶೇ 80 ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡುವಲ್ಲಿ ಸರ್ಕಾರ ಬದ್ದವಾಗಿದೆಂದರು.‌ ಗಡಿ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದೆ. ಕನ್ನಡ ನಾಡಿನ ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ 400 ಕೋಟಿ ರೂ ಅನುದಾನವನ್ನು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆಂದರು.

Also Read  ಮಂಗಳೂರು: ಕಡಲತೀರದಲ್ಲಿ ಮದ್ಯ ಸೇವಿಸುತ್ತಿದ್ದ70 ಕ್ಕೂ ಅಧಿಕ ಮಂದಿಯ ಬಂಧನ

 

 

error: Content is protected !!
Scroll to Top