ಸಾರಿಗೆ ನೌಕರರ ವೇತನ ಪರಿಷ್ಕರಣೆ ➤ ಸಚಿವ ಬಿ.ಶ್ರೀರಾಮುಲು ‌

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಫೆ.12. ಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಭರವಸೆ ನೀಡಿದ್ದಾರೆ.

ಮೊಳಕಾಲ್ಮುರು ಪಟ್ಟಣದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ನಿರ್ಮಿಸಲಾಗುತ್ತಿರುವ ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ ನೆರವೇರಿಸಿ‌ ಸಚಿವರು ಮಾತನಾಡಿದರು.

Also Read  ಉಪ್ಪಿನಂಗಡಿ: ಅನಧಿಕೃತ ಕಟ್ಟಡಗಳ ತೆರವು ➤ ಗ್ರಾಮ ಪಂಚಾಯತ್ ಕಾರ್ಯಾಚರಣೆ

 

error: Content is protected !!
Scroll to Top