ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಗವರ್ನರ್ ಆಗಿ ನೇಮಕ !       

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.12. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಎಸ್.ಅಬ್ದುಲ್ ನಝೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ‌.

ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ನೇಮಕಾತಿಗೆ ರಾಷ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ನ್ಯಾಯಮೂರ್ತಿ ನಝೀರ್ ನಿವೃತ್ತರಾಗಿದ್ದರು.ಅವರು ಕರ್ನಾಟಕ ಹೈಕೋರ್ಟ್ ನಲ್ಲೂ ಜಡ್ಜ್ ಆಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

 

error: Content is protected !!
Scroll to Top