ಬೆಂಗಳೂರಲ್ಲಿ ಫೆ.12. ರಂದು ‘ಏರ್ ಶೋ’ ಆರಂಭ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.12. ಫೆ.13 ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ವೈಮಾನಿಕ ಪ್ರದರ್ಶನ ನಡೆಯಲಿದೆ. ಹೀಗಾಗಿ ನಗರದ ಹಲವು ರಸ್ತೆಗಳಲ್ಲಿ ಕೆಲವೊಂದು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಬಾರಿಯ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧವಿಲ್ಲ. ಏರೋ ಇಂಡಿಯಾ ಅಧಿಕೃತ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿಸಬಹುದಾಗಿದೆ. ಕೇವಲ ವಿಮಾನಗಳನ್ನು ನೋಡುವ ಸ್ಥಳದ ಪ್ರವೇಶಕ್ಕೆ 1 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿಮಾನಗಳು ಹಾಗೂ ಎಕ್ಸಿಬಿಷನ್ ನೋಡಲು ಟಿಕೆಟ್ ಗೆ 2 ಸಾವಿರದ 500 ರೂಪಾಯಿ ಟಕೆಟ್ ದರ ನಿಗದಿಪಡಿಸಲಾಗಿದೆ. ಮೊದಲು 2 ದಿನ ಉದ್ಯಮಕ್ಕೆ ಸಂಬಂಧಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಕೊನೆಯ 3 ದಿನ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

Also Read  ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು

 

error: Content is protected !!
Scroll to Top