ಮಂಗಳೂರು: ವಿಮಾನ ನಿಲ್ದಾಣದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.13. ಭಾರತದಿಂದ ದುಬೈಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ದುಬೈಗೆ ಪ್ರಯಾಣ ಬೆಳೆಸಿದ್ದ ಭಟ್ಕಳದ ಅನಸ್ ಮತ್ತು ಅಮ್ಮರ್ ಎಂಬ ಪ್ರಯಾಣಿಕರು ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಈ ವಜ್ರಗಳನ್ನು ಮುಂಬಯಿಯಿಂದ ತಂದಿದ್ದರು ಎನ್ನಲಾಗಿದೆ.

Also Read  ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ

 

 

error: Content is protected !!
Scroll to Top