ಸಾಲದ ವಿಷಯಕ್ಕೆ ಉದ್ಯಮಿಯ ಕೊಲೆ ➤ವೈದ್ಯ ಅರೆಸ್ಟ್

(ನ್ಯೂಸ್ ಕಡಬ) newskadaba.com. ಬೆಳಗಾವಿ. ಫೆ.13.  ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ. ಉದ್ಯಮಿ ಗೋಕಾಕ್‌ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ  ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ರಾಜು ಅವರ ದ್ವಿಚಕ್ರವಾಹನ ಗೋಕಾಕ್ ನಗರದ ಸಿಟಿ ಆಸ್ಪತ್ರೆ ಬಳಿ ಪತ್ತೆಯಾಗಿತ್ತು.

ಹಾಗೇ ಪೊಲೀಸರು ಉದ್ಯಮಿ ರಾಜು ಝಂವರ್‌ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ರಾಜು ಝಂವರ್‌ ನಾಪತ್ತೆ ಬಳಿಕ ವೈದ್ಯ ಡಾ.ಸಚಿನ್ ಶಿರಗಾವಿ ಕೂಡ ರಾಜುಗೆ ದೂರವಾಣಿ ಕರೆ ಮಾಡಿದ್ದನು.

Also Read  ಮಾನಸಿಕ ಅಸ್ವಸ್ಥನಿಂದ ತಾಯಿ ಹಾಗೂ ಸಹೋದರನಿಗೆ ಹಲ್ಲೆ..! ➤ ಇಬ್ಬರು ಗಂಭೀರ

ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾನೆ. ತಾನು ಡಾ.ಸಚಿನ್ ಶಿರಗಾವಿ ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ಹೇಳಿದ್ದಾನೆ. ಸದ್ಯ ನಾಪತ್ತೆಯಾಗಿದ್ದ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ.

error: Content is protected !!
Scroll to Top