(ನ್ಯೂಸ್ ಕಡಬ) newskadaba.com ಪುಣೆ, ಫೆ.13. ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಸುಳ್ಳು ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಹೇಳಿದ್ದಾರೆ.ಮದ್ಯದ ನಶೆಯಲ್ಲಿ ಈ ರೀತಿ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪುಣೆಯ ಮುಂಡ್ವಾ ಪ್ರದೇಶದಲ್ಲಿರುವ ಬಹು ಅಂತಸ್ತಿನ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿದ್ದ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಬಂದಿದ್ದಾಗಿ ಉಪ ಪೊಲೀಸ್ ಆಯುಕ್ತ ವಿಕ್ರಾಂತ್ ದೇಶ್ ಮುಖ್ ತಿಳಿಸಿದ್ದಾರೆ.ನಂತರ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ದಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಇದೊಂದು ಹುಸಿಕರೆ ಎಂಬುದು ದೃಢಪಟ್ಟಿತು. ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ನಲ್ಲಿ ಪತ್ತೆ ಬಂಧಿಸಲಾಗಿದೆ. ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.