ಮರ್ಧಾಳ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ.

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ➤ ಇಬ್ಬರು ಯುವತಿಯರನ್ನು ರಕ್ಷಿಸಿದ ಖಾಕಿ ತಂಡ

error: Content is protected !!
Scroll to Top