(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ. 13: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ ಹಾವಳಿ ಮುಂದುವರೆದಿದ್ದು, ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಕಳೆದ ಆರು ತಿಂಗಳಿನಿಂದ ಹುಲಿ ದಾಳಿ ನಿರಂತರವಾಗಿದ್ದು, ಜಾನುವಾರು ಗಳನ್ನು ಸಾಕಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಆತಂಕಕ್ಕೀಡಾಗಿದೆ.
ಮೇವಿಗೆ ಹೋದ ಹಸುಗಳು ಮನೆಗೆ ವಾಪಸ್ ಬರುವವರೆಗೂ ರೈತರು ಆತಂಕದಲ್ಲೇ ಸಮಯ ಕಳೆಯುವ ಪರಿಸ್ಥಿತಿ ಮಲೆನಾಡಲ್ಲಿ ನಿರ್ಮಾಣವಾಗಿದೆ. ಕಾಡಾನೆ, ಕಾಡುಕೋಣ ದಾಳಿಯಿಂದ ಹೈರಣಾದ ಜನರು ಕಳೆದ ಆರು ತಿಂಗಳಿಂದ ಹುಲಿ ದಾಳಿಯ ಆತಂಕದಲ್ಲಿದ್ದಾರೆ. ಹುಲಿ ದಾಳಿಯಿಂದ ಈವರೆಗೂ ಸರಿಸುಮಾರು 50ಕ್ಕೂ ಹೆಚ್ಚು ರಾಸುಗಳು ಹುಲಿ ದಾಳಿಯಿಂದ ಸಾವನ್ನಪ್ಪಿವೆ.