ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್‌ ವಿಶ್ವವಿದ್ಯಾಲಯದ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳೆಲ್ಲ ಬಿಬಿಎ 5ನೇ ಸೆಮಿಸ್ಟರ್​​ನಲ್ಲಿ ಓದುತ್ತಿದ್ದರು ಎನ್ನಲಾಗಿದೆ‌‌.

ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಬಗ್ಗೆ ಅವಮಾನಿಸಿ ಸ್ಕಿಟ್ ಪ್ರದರ್ಶನ ಮಾಡಿದ್ದರು ಎನ್ನಲಾಗಿದೆ.

Also Read  ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

 

 

error: Content is protected !!
Scroll to Top