ಲಿಫ್ಟ್ ನಲ್ಲಿ ಸಿಲುಕಿ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.14. ಉತ್ತರ ದಿಲ್ಲಿ ಜಿಲ್ಲೆಯ ಹೊರ ವಲಯದ ಬವಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೂಲರ್ ಫ್ಯಾಕ್ಟರಿಯೊಂದರ ಲಿಫ್ಟ್‌ ಅಡಿ ಸಿಲುಕಿ 15 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.


ಮೃತ ಬಾಲಕನನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನ ತಾಯಿಯು ಆ ಫ್ಯಾಕ್ಟರಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.


ಇನ್ನು ಬಾಲಕ ಆಟವಾಡುತ್ತಾ, ಲಿಫ್ಟ್ ಅಡಿಗೆ ಹೋಗಿದ್ದು, ಯಾರೋ ಲಿಫ್ಟ್ ಗಾಗಿ ಗುಂಡಿ ಒತ್ತಿದಾಗ ಕೆಳಗೆ ಬಂದಿರುವ ಎಲಿವೇಟರ್ ಅಡಿಗೆ ಸಿಕ್ಕಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

Scroll to Top