ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕಡಬ, ಫೆ.14. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಐತ್ತೂರು ಗ್ರಾಮದ ಮಾಳ ನಿವಾಸಿ ಭಾಸ್ಕರ್ ಗೌಡರವರು 200 ಮೀ. ಓಟ ಹಾಗೂ ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಭಾಸ್ಕರ ಗೌಡರವರು 200 ಮೀ. ಓಟದಲ್ಲಿ ಪ್ರಥಮ ಹಾಗೂ 400 ಮೀ.ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 1500 ಮೀ. ಹಾಗೂ 400 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಐತ್ತೂರು ಗ್ರಾಮದ ಮಾಳ ನಿವಾಸಿ ಶೀನಪ್ಪ ಗೌಡರವರ ಪುತ್ರ. ರಾಷ್ಟ್ರಮಟ್ಟದ ಕ್ರೀಡಾಕೂಟವು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

Also Read  ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್

error: Content is protected !!
Scroll to Top