➤ ಗುಬ್ಬಿ ಬಳಿ ಸಿಮೆಂಟ್‌ ಪೈಪ್‌ನಲ್ಲಿ ಹುಲಿಯೊಂದು ಅನುಮಾನಾಸ್ಪದ ಸಾವು

(ನ್ಯೂಸ್ ಕಡಬ) newskadaba.com. ತುಮಕೂರು, ಫೆ.14. ಅನುಮಾನಾಸ್ಪದ ರೀತಿಯಲ್ಲಿ ಹುಲಿ ಯೊಂದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಹುಲಿಯ ಸುಳಿವು ಇರಲಿಲ್ಲ. ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.

ಇಂದು ಮುಂಜಾನೆ ಚಿಕ್ಕಹೆಗಡೇಹಳ್ಳಿ ಗ್ರಾಮದ ವಾಸಿಯೊಬ್ಬರು ಬಹಿರ್ದೆಸೆಗೆ ಹೋಗಿದ್ದ, ಸಂದರ್ಭದಲ್ಲಿ ಹುಲಿ ಸಾವನಪ್ಪಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ. ಹುಲಿಯ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ಮುಂದುವರೆಸಿದ್ದಾರೆ.

Also Read  ಗ್ರಾಹಕರ ವಿಳಾಸಕ್ಕೆ ತಲುಪಿಸದೇ 6 ಐಫೋನ್ ಗಳ ಜೊತೆ ಪರಾರಿಯಾದ ಡೆಲಿವರಿ ಬಾಯ್ಸ್

error: Content is protected !!
Scroll to Top