ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ವಿದ್ಯಾರಣ್ಯಾಪುರದ ಎನ್ ಐಟಿ ಜಂಕ್ಷನ್ ಬಳಿ ಅಪಾರ್ಟ್ ಮೆಂಟ್ ನ ಸುಚಿರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದು, ಸುಚಿರ್, ತಾಯಿ ಜೊತೆ ಬೆಂಗಳೂರಿನಲ್ಲಿ ಕೆಲವು ವರ್ಷಗಳಿಂದ ವಾಸವಾಗಿದ್ದ.

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಖಿನ್ನತೆಯಿಂದ ಬಳುತ್ತಿದ್ದ ಸುಚಿರ್ ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿದ್ಯಾರಣ್ಯಾಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

 

error: Content is protected !!
Scroll to Top