(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಐದು ಅಂತಸ್ತಿನ ಕಟ್ಟಡದ ಮೇಲಿನಿಂದ ಬಿದ್ದು ಬಿಸಿಎ ಓದುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಸುಚೀರ್ (21) ಐದನೇ ಮಹಡಿಯ ಟೆರೇಸ್‌ಗೆ ನಡೆದುಕೊಂಡು ಹೋಗಿ ಅಲ್ಲಿಂದ ಬಿದ್ದಿದ್ದಾನೆ. ಸುಚೀರ್ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆಯೇ ಅಥವಾ ಜಿಗಿದಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಸುಚೀರ್ ಮತ್ತಿಕೆರೆಯ ಪ್ರಸಿದ್ಧ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ವಿದ್ಯಾರಣ್ಯಪುರದ ಎನ್‌ಟಿಐ ಲೇಔಟ್‌ನಲ್ಲಿ ತನ್ನ ತಾಯಿ ಮತ್ತು ಅಜ್ಜನೊಂದಿಗೆ ವಾಸಿಸುತ್ತಿದ್ದ.