➤ಆರ್ ಸಿಬಿ ತಂಡಕ್ಕೆ ಸಾನಿಯಾ ಮಿರ್ಜಾ ಎಂಟ್ರಿ..!

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.16. ಈಗಾಗಲೇ ಟೆನಿಸ್​ಗೆ ವಿದಾಯ ಹೇಳಿರುವ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಆರ್​ಸಿಬಿ ತಂಡ ಮಹಿಳಾ ಪ್ರಿಮಿಯರ್​ ಲೀಗ್​ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ. 6 ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತೆ ಸಾನಿಯಾ ಇದೇ ತಿಂಗಳು ಕೊನೆಯ ಬಾರಿಗೆ ಟೆನಿಸ್ ಅಂಗಳಕ್ಕೆ ಕಾಲಿಡಲಿದ್ದಾರೆ. ಇದಾದ ನಂತರ ಐಪಿಎಲ್‌ನಲ್ಲಿ ಬ್ಯುಸಿಯಾಗಲಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

Also Read  ಮುಂದಿನ `CBI’ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ಬುಧವಾರ ಸಾನಿಯಾ ಅವರನ್ನು ಆರ್‌ಸಿಬಿ ಮಹಿಳಾ ತಂಡದ ಮೆಂಟರ್‌ ಆಗಿ ನೇಮಕ ಮಾಡಲಾಗಿದೆ. ಸಾನಿಯಾ ಅವರನ್ನು ಮಹಿಳಾ ತಂಡದ ಮಾರ್ಗದರ್ಶಕರನ್ನಾಗಿ ಮಾಡಿರುವುದಾಗಿ ಫ್ರಾಂಚೈಸಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ.

error: Content is protected !!