ರೈತರ ಆತ್ಮಹತ್ಯೆ ➤ ಕರ್ನಾಟಕಕ್ಕೆ 2ನೇ ಸ್ಥಾನ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.16. ಬೆಂಗಳೂರು ಪಿಎಂ ಕಿಸಾನ್ ,  ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ  ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16854 ಮತ್ತು ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 3573 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಟ್ಟು ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ  ಒಟ್ಟು ರೈತರ ಪೈಕಿ ಕಳೆದ ಮೂರು ವರ್ಷಗಳಲ್ಲಿ ಕೇವಲ 462 ರೈತರಿಗೆ ಮಾತ್ರ ಪರಿಹಾರ ಒದಗಿಸಿದೆ. ಬಿಹಾರ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಶೂನ್ಯ ವರದಿಯಾಗಿದೆ.

Also Read  ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

ಕೌಟುಂಬಿಕ ಕಾರಣ, ಅನಾರೋಗ್ಯ, ಮಾದಕ,ಕುಡಿತ, ವೈವಾಹಿಕ, ನಿರುದ್ಯೋಗ, ಬಡತನ ಮುಂತಾದ ಕಾರಣಗಳಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಡಿಎಸ್ ಐ ವರದಿಯನ್ನಾಧರಿಸಿ ಕೇಂದ್ರ ಕೃಷಿ ಸಚಿವಾಲಯವು ಅಂಕಿ ಅಂಶಗಳನ್ನು ರಾಜ್ಯಸಭೆಗೆ ಮಂಡಿಸಿದೆ.

error: Content is protected !!
Scroll to Top