ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಫೆ.15.  ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಂದು ಬೃಹತ್ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರರ ಶಂಕಿತ ಬೆಂಬಲಿಗರಿಗೆ ಸಂಬಂಧಿಸಿದಂತೆ ಈ ಪತ್ತೆ ಕಾರ್ಯಾಚರಣೆ ನಡೆದಿದೆ.


ಕರ್ನಾಟಕದ ಅನೇಕ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಮಿಳುನಾಡು ಮತ್ತು ಕೇರಳದ 60ಕ್ಕೂ ಅಧಿಕ ಪ್ರದೇಶಗಳಲ್ಲಿ ಕೂಡ ಭಯೋತ್ಪಾದನಾ ನಿಗ್ರಹ ತಂಡ ದಾಳಿ ಮಾಡಿದೆ. ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನಲ್ಲಿ ಕಳೆದ ವರ್ಷ ನಡೆದ ಕೊಯಮತ್ತೂರು ಕಾರ್ ಸಿಲಿಂಡರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

Also Read  ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

error: Content is protected !!
Scroll to Top