ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ !!!

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಫೆ.14. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆಯವರು ಗೌರವಿಸಿದರು.

ಬಳಿಕ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ ನವಜೀವನ ಸಮಾವೇಶ, ಮದ್ಯವರ್ಜಿತರ ಕೌಟುಂಬಿಕ ಸಮ್ಮಿಲನ ಕಾರ್ಯಕ್ರಮವನ್ನು ರಾಜ್ಯಪಾಲರು ಉದ್ಘಾಟಿಸಿದರು.

Also Read  ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು

 

error: Content is protected !!
Scroll to Top