(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲೇ ಅತ್ಯಧಿಕ ಮಲೇರಿಯಾ ಪ್ರಕರಣ ಕಂಡುಬರುತ್ತಿದ್ದ ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಗಣನೀಯ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರ್ಷಿಕ 4 ಸಾವಿರಕ್ಕೂ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಪ್ರಕರಣ 168ಕ್ಕೆ, ಉಡುಪಿ ಜಿಲ್ಲೆಯಲ್ಲಿ 2,217ರಿಂದ 18ಕ್ಕೆ ಇಳಿಕೆ ಕಂಡಿದೆ.
ಉಭಯ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಕಾರ್ಯತಂತ್ರಗಳು ಫಲಿಸುತ್ತಿವೆ. ಪ್ರಕರಣ ಕಂಡುಬಂದರೆ 1 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಗಾ ವಹಿಸಲಾಗುತ್ತಿದೆ.
ಆರೋಗ್ಯ ಇಲಾ ಖೆಯ ವಿಶೇಷ ತರಬೇತಿ ಹೊಂದಿದ ಕಾರ್ಯ ಕರ್ತರು ಮನೆ ಮನೆಗೆ, ನಿರ್ಮಾಣ ಹಂತದ ಕಟ್ಟಡ ಪ್ರದೇಶಕ್ಕೆ ತೆರಳಿ ಸಾರ್ವಜನಿಕರಿಗೆ ಮತ್ತು ಕಾರ್ಮಿಕರಿಗೆ ಮಲೇರಿಯಾ ಪರೀಕ್ಷೆ ಮಾಡುತ್ತಿದ್ದಾರೆ.