(ನ್ಯೂಸ್ ಕಡಬ) newskadaba.com. ಮಂಗಳೂರು, ಫೆ.15. ಮಂಗಳೂರು ಮೂಲದ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್ ಲಿಮಿಟೆಡ್ (CAMPCO) ಅಡಿಕೆ ಆಮದು ಕನಿಷ್ಠ ಬೆಲೆಯನ್ನು ಎಂಐಪಿ ಪ್ರತಿ ಕೆ.ಜಿ.ಗೆ ₹251ಯಿಂದ ₹351ಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ.
ಬುಧವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ CAMPCO ಅಧ್ಯಕ್ಷ ಎ ಕಿಶೋರ್ ಕುಮಾರ್ ಕೊಡ್ಗಿ, ಈ ನಿರ್ಧಾರಕ್ಕಾಗಿ ಇಡೀ ಅಡಿಕೆ ಬಂಧುಗಳು ಕೇಂದ್ರಕ್ಕೆ ಕೃತಜ್ಞರಾಗಿದ್ದಾರೆ ಎಂದರು.