ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳು ನಿಷೇಧ:!!!      ➤ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.16. ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕ್ರಮ ಫೆ. 1 ರಿಂದಲೇ ಜಾರಿಯಾಗಿದೆ. ಈ ಕ್ರಮಕ್ಕೆ ಬೆಂಬಲ ಸೂಚಿಸಿ ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ.

ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಆದ್ದರಿಂದ ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ವೇಸ್ಟ್ (ಮ್ಯಾನೇಜ್ಮೆಂಟ್ ಮತ್ತು ಹ್ಯಾಡ್ಲಿಂಗ್) 2011 ಹಾಗೂ ತಿದ್ದುಪಡಿ ನಿಯಮಗಳು 2016 ರ ಮೂಲಕ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಹೆಚ್ಚು ನಿರ್ಬಂಧಗಳನ್ನು ಹೇರಿದೆ. ಇದನ್ನು ಅನುಸರಿಸಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್ ಬ್ಯಾಗ್ ಹಾಗೂ ಇತರೆ ಉತ್ಪನ್ನಗಳ ಬಳಕೆ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದೆ.

Also Read  ಹಿಮಾಚಲ ಪ್ರದೇಶ ಸ್ಪೀಕರ್ ಭೇಟಿಯಾದ ಯು.ಟಿ. ಖಾದರ್- ಚರ್ಚೆ

 

error: Content is protected !!
Scroll to Top