ಉಗ್ರರ ಒಳನುಸುಳುವಿಕೆ ಯತ್ನ ವಿಫಲ ➤ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀ ನಗರ, ಫೆ.16. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ಗುರುವಾರ ನಸುಕಿನ ಜಾವ ವಿಫಲಗೊಳಿಸಿದ್ದು ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ ಎಂದು ವರದಿ ತಿಳಿಸಿದೆ.

ಕುಪ್ವಾರ ಪೊಲೀಸರ ಸ್ಪಷ್ಟ ಮಾಹಿತಿಯೊಂದಿಗೆ ಸೇನೆ ಮತ್ತು ಪೊಲೀಸ್ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸೈದ್ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆಯನ್ನು ತಡೆಯಲಾಯಿತು. ಕಾರ್ಯಾಚರಣೆಯಲ್ಲಿ ಓರ್ವ ನುಸುಳುಕೋರನನ್ನು ಹತ್ಯೆಗೈಯಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Also Read  ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

 

 

error: Content is protected !!
Scroll to Top