ಕಲುಷಿತ ನೀರು ಸೇವನೆ  ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ. 16. ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತರು ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿ ನೀರು ಕಲುಷಿತವಾಗಿದ್ದು, ಇದನ್ನು ಸೇವಿಸಿದ 30 ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು.ಇವರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

Also Read  15 ವರ್ಷದ ಕೆಳಗಿನ ಮಕ್ಕಳಿಗೆ H3N2 ಅಪಾಯ ಹೆಚ್ಚು !      ➤  ಸರ್ಕಾರದಿಂದ ಮಾರ್ಗ ಸೂಚಿ ಜಾರಿ

ಅಸ್ವಸ್ಥಗೊಂಡ ಎಲ್ಲಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು.ಕಾರಣವಾದ ಅಂಶಗಳ ಬಗ್ಗೆ ಕೂಡ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಗುರುರಾಜ ಹಿರೇಗೌಡರ್ ಹೇಳಿದ್ದಾರೆ‌.

 

 

error: Content is protected !!
Scroll to Top