ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಮುಂಬೈ, ಫೆ.16. ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಆರೋಪಿ ರಾಜ್‌ಕುಮಾರ್ ಬಾಬುರಾಮ್ ಪಾಲ್ ಅವರನ್ನು ಬಂಧಿಸಲಾಗಿದೆ, ಸೆಕ್ಯುರಿಟಿ ಗಾರ್ಡ್​ ವಿವಾಹೇತರ ಸಂಬಂಧ ಹೊಂದಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಡ ಹೇರುತ್ತಿದ್ದಳು, ಹಾಗಾಗಿ ಹತ್ಯೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.

ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದ ಕೋಪರ್ಖೈರ್ನೆ ಪ್ರದೇಶದ ಹೌಸಿಂಗ್ ಸೊಸೈಟಿ ಬಳಿಯ ಪೊದೆಯಲ್ಲಿ 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿಶ್ವನಾಥ್ ಕೋಲೇಕರ್ ತಿಳಿಸಿದ್ದಾರೆ. ಮಹಿಳೆಯನ್ನು ದುಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ, ಸಾಕ್ಷ್ಯವನ್ನು ನಾಶಮಾಡಲು ದೇಹವನ್ನು ಪೊದೆಯ ಬಳಿ ಎಸೆಯಲಾಗಿತ್ತು ಎಂದು ವರದಿ ತಿಳಿಸಿದೆ.

Also Read  ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ➤ ಓರ್ವ ಪ್ರಯಾಣಿಕ ಮೃತ್ಯು

 

 

error: Content is protected !!
Scroll to Top