ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ!

(ನ್ಯೂಸ್ ಕಡಬ) newskadaba.com ಕಲಬುರಗಿ, ಫೆ.16.  ಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ಸಂಭವಿಸಿದೆ.

ಮೃತ ಗೃಹಿಣಿಯನ್ನು 39 ವರ್ಷದ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಪತಿ ಏಜಾಜ್ ಅಹ್ಮದ್ ಕಳೆದ ರಾತ್ರಿ ನಿದ್ದೆಗೆ ಜಾರಿದ ಫರೀದಾ ಬೇಗಂ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ ಎಂದು ವರದಿಯಾಗಿದೆ.

ಎಜಾಜ್ ಹಾಗೂ ಫರೀದಾ ಬೇಗಂ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ಪತ್ನಿಯ ಶೀಲ ಶಂಕಿಸುತ್ತಿದ್ದ ಪತಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಇದೇ ಅಲ್ಲದೆ ಶಾಲೆಗೆ ಹೋಗದಂತೆ ಪ್ರತಿದಿನ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸ್ಪೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ  ಈ ಪ್ರಕರಣ ದಾಖಲಾಗಿದೆ.

Also Read  ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು

 

error: Content is protected !!