ಪಿಲಿಕುಳದ ಗುತ್ತಿನ ಮನೆಯಲ್ಲಿ ನಡೆಯುತ್ತಿದೆ ರಜನಿಕಾಂತ್‌ ಜೈಲರ್‌‌ ಸಿನಿಮಾದ ಶೂಟಿಂಗ್‌

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.16. ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ಜೈಲರ್‌‌ ಸಿನಿಮಾದ ಶೂಟಿಂಗ್‌ಗಾಗಿ ಮಂಗಳೂರಿಗೆ ಆಗಮಿಸಿದ್ದು, ಪಿಲಿಕುಳದ ಗುತ್ತಿನ ಮನೆಯಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಪಿಲಿಕುಳದ ಗುತ್ತಿನ ಮನೆಯಲ್ಲಿ ಜೈಲರ್‌ ಚಿತ್ರದ ಚಿತ್ರೀಕರಣಕ್ಕಾಗಿ ವಿಶೇಷ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗುತ್ತಿದ್ದು, ಭದ್ರತೆ ಮತ್ತು ಗೌಪ್ಯತೆ ದೃಷ್ಟಿಯಿಂದ ಅಭಿಮಾನಿಗಳು ಹಾಗೂ‌ ಸಾರ್ವಜನಿಕರಿಗೆ ಗುತ್ತಿನ ಮನೆಗೆ ಪ್ರವೇಶ ನಿಷೇಧಿಸಲಾಗಿದೆ.

 

Scroll to Top