ಸೆಲ್ಫಿ ನಿರಾಕರಣೆ ➤ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.16.  ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ಕಾರನ್ನು ಹಿಂಬಾಲಿಸಿ ಹಣ ನೀಡದಿದ್ದರೆ ಸುಳ್ಳು ಪ್ರಕರಣಗಳಿಗೆ ಬೆದರಿಕೆ ಹಾಕಿರುವುದಾಗಿ  ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಪೃಥ್ವಿ ಶಾ  ವಾಯುವ್ಯ ಮುಂಬೈನ ಸಾಂತಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದಾಗ ಅಪರಿಚಿತರು ಸೆಲ್ಫಿಗೆ ಒತ್ತಾಯಿಸಿದ್ದಾರೆ.

Also Read  ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

ಇಬ್ಬರು ವ್ಯಕ್ತಿಗಳು ಸೆಲ್ಫಿಗೆ ಪೃಥ್ವಿ ಶಾ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಇದೇ ಗುಂಪು ಮತ್ತೆ ಬಂದಿದ್ದು, ಇತರ ಆರೋಪಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಕೇಳಿದ್ದಾರೆ. ಈ ವೇಳೆ ಶಾ ನಿರಾಕರಿಸಿದಾಗ, ಶಾ ಅವರ ಸ್ನೇಹಿತ ರೆಸ್ಟೋರೆಂಟ್ ಮ್ಯಾನೇಜರ್ ಗೆ ಕರೆ ಮಾಡಿ, ದೂರು ಸಲ್ಲಿಸಿದ್ದಾರೆ.  ಆರೋಪಿಗಳನ್ನು ಹೊಟೇಲ್‌ನಿಂದ ಹೊರಹೋಗುವಂತೆ ವ್ಯವಸ್ಥಾಪಕರು ಹೇಳಿದ್ದಾರೆ.

ಈ ಘಟನೆಯಿಂದ ಕೆರಳಿದ  ವ್ಯಕ್ತಿಗಳು ಹೋಟೆಲ್ ಹೊರಗಡೆ ಬೇಸ್ ಬಾಲ್ ಬ್ಯಾಟ್ ಗಳಿಂದ ಶಾ ಅವರ ಸ್ನೇಹಿತನ ಕಾರನನು ಧ್ವಂಸಗೊಳಿಸಿದ್ದು, ಹಿಂಭಾಗದ ಗಾಜುಗಳನ್ನು ಒಡೆದು ಹಾಕಿದ್ದಾರೆ.  ಘಟನೆ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top