ಕಲ್ಲಡ್ಕ: ಚೂರಿ ಇರಿತ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಮಂಗಳವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರದಂದು ನಡೆದಿದೆ.

ಬಂಧಿತ ಆರೋಪಿಯನ್ನು ಕಲ್ಲಡ್ಕ ನಿವಾಸಿ ಖಲೀಲ್ ಎಂದು ಗುರುತಿಸಲಾಗಿದೆ. ಈತ ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬಾತನಿಗೆ ಮಂಗಳವಾರ ರಾತ್ರಿ ಚೂರಿಯಿಂದ ಇರಿದಿದ್ದ. ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್ ಇಲಾಖೆ ನಾಲ್ಕು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ‌ ಬೀಸಿದ್ದರು. ಬುಧವಾರದಂದು ಓರ್ವ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Also Read  ಉಡುಪಿ: ಯುವ ಉದ್ಯಮಿ ಆತ್ಮಹತ್ಯೆ

error: Content is protected !!
Scroll to Top