ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಆಕಾಶಭವನದ ಆನಂದನಗರ ಸರ್ಕಲ್ ಸಮೀಪ ಇರುವ ಭಂಡಾರಿ ಟವರ್ಸ್ ಕಟ್ಟಡದ ಎದುರು ರಸ್ತೆ ದಾಟುತ್ತಿದ್ದ ವೃದ್ದೆಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಮೃತರಾದವರನ್ನು ಆಕಾಶಭವನ ನಿವಾಸಿ ಶ್ರೀಮತಿ ಗೀತಾ (74 ವರ್ಷ) ಎಂದು ಗುರುತಿಸಲಾಗಿದೆ.

ಬಸ್ಸು ಚಾಲಕ ವನೀಶ್ ಎಂಬಾತ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಆಕಾಶಭವನ ಮುಖ್ಯ ರಸ್ತೆಯಲ್ಲಿ 4ನೇ ಮೈಲು ಕಡೆಯಿಂದ ಆನಂದನಗರ ಸರ್ಕಲ್ ಕಡೆಗೆ ರಸ್ತೆಯಲ್ಲಿ ಹಂಪ್ಸ್ ಇರುವ ಜಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಗೀತಾ ಅವರಿಗೆ ಢಿಕ್ಕಿ ಹೊಡೆದಿದ್ದಾನೆ.

Also Read  ಅಂಗನವಾಡಿ ನೇಮಕಾತಿಗೆ ಅರ್ಜಿ ಆಹ್ವಾನ

 

error: Content is protected !!
Scroll to Top