(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಯಕ್ಷಗಾನದ ಹೆಸರಾಂತ ಭಾಗವತ, ಕಂಚಿನ ಕಂಠದ ‘ಬಲಿಪ ಶೈಲಿ’ಯ ಹಾಡುಗಾರಿಕೆಗೆ ಖ್ಯಾತವಾಗಿರುವ ಬಲಿಪ ನಾರಾಯಣ ಭಾಗವತ ಅವರು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಬಲಿಪ ನಾರಾಯಣ ಭಾಗವತರು ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ಮಾರೂರು ನೂಯಿಯಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ ದಂಪತಿಯ ಪುತ್ರರಾದ ಅವರು, ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್ 13ರಂದು ಜನಿಸಿದ್ದು, 13ನೇ ವಯಸ್ಸಿಗೆ ಯಕ್ಷಗಾನ ರಂಗವನ್ನು ಪ್ರವೇಶಿಸಿದ್ದ ಅವರು, ಯಕ್ಷ ರಂಗದ ಭೀಷ್ಮ ಎಂಬ ಖ್ಯಾತಿಯನ್ನು ಗಳಿಸಿದ್ದರು ಎಂದು ವರದಿ ತಿಳಿಸಿದೆ.
Also Read ಕಡಬ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಸಾನ್ವಿಕ ಕೆ ಎಸ್ ರವರಿಗೆ ಚಿನ್ನ ಮತ್ತು ಬೆಳ್ಳಿ