ಕಲ್ಲಡ್ಕ: ಬಸ್ಸಿಗೆ ಕಲ್ಲೆಸೆತ ಪ್ರಕರಣ ► ಆರೋಪಿಯ ಬಂಧನ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.27. ಮಂಗಳವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದ ಚೂರಿ ಇರಿತ ಸಂದರ್ಭದಲ್ಲಿ ಬಸ್ಸೊಂದಕ್ಕೆ ಕಲ್ಲೆಸೆದ ಪ್ರಕರಣದಲ್ಲಿ ಓರ್ವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ.







ಬಂಧಿತ ಆರೋಪಿಯನ್ನು ಕಲ್ಲಡ್ಕದ ಅಮ್ಟೂರು ನಿವಾಸಿ ಕೌಶಿಲ್(23) ಎಂದು ಗುರುತಿಸಲಾಗಿದೆ. ಕರೋಪಾಡಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾಗಿದ್ದ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಅರೋಪಿ ಕೇಶವ ಎಂಬಾತನಿಗೆ ಮಂಗಳವಾರ ರಾತ್ರಿ ಚೂರಿಯಿಂದ ಇರಿಯಲಾಗಿತ್ತು. ಈ ಸಂದರ್ಭದಲ್ಲಿ ಕೌಶಿಲ್ ಬಸ್ಸೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿದ್ದನೆನ್ನಲಾಗಿದ್ದು,
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಕೌಶಿಲ್‌ನನ್ನು ಬುಧವಾರದಂದು ಬಂಧಿಸಿದ್ದಾರೆ.






error: Content is protected !!
Scroll to Top