ಎಣ್ಣೆ ಸಪ್ಲೈ ತಡವಾಗಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ   ➤23 ದಿನದ ಬಳಿಕ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.17.  ಬಾರ್​ನಲ್ಲಿ ಸಪ್ಲೈ ತಡವಾಗಿದ್ದಕ್ಕೆ ಸಿಬ್ಬಂದಿ ಬಸವರಾಜು (39) ಎಂಬುವವರ ಮೇಲೆ ಹಲ್ಲೆ ಮಾಡಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಸವರಾಜ ನಿರ್ಲಕ್ಷ್ಯವಹಿಸಿದ್ದಾನೆ. ಬಳಿಕ ಮಾರನೇ ದಿನ ತಲೆ ತಿರುಗುವಂತಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದ.

ಇದೀಗ 23 ದಿನದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಾದ ಸುರೇಶ್(29), ವಿನೋದ್ ಕುಮಾರ್ ( 28) ಎಂಬುವವರನ್ನ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Also Read  ಕಡಬ: ಕಾರು - ಮಿನಿ ಬಸ್ ನಡುವೆ ಅಪಘಾತ - ನಾಲ್ವರಿಗೆ ಗಾಯ

error: Content is protected !!
Scroll to Top