ಟ್ಯಾಂಕರ್-ಟ್ರಕ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು



(ನ್ಯೂಸ್ ಕಡಬ) newskadaba.com ಜೈಪುರ, ಫೆ.17.  ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಎಲ್ ಪಿಜಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಮಾರ್ಬಲ್ ಸಾಗಿಸುತ್ತಿದ್ದ ಟ್ರಕ್ ಗೆ ಢಿಕ್ಕಿ ಹೊಡದ ಪರಿಣಾಮವಾಗಿ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.







”ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ.ಅಕ್ಕ ಪಕ್ಕದ ಅಂಗಡಿಗಳು ಮತ್ತು ನಿವಾಸಗಳು ಸಹ ಬೆಂಕಿಗೆ ಆಹುತಿಯಾಗಿವೆ”ಎಂದು ಅಜ್ಮೀರ್ ಪೊಲೀಸ್ ಸೂಪರಿಂಟೆಂಡೆಂಟ್  ಚುನಾರಾಮ್ ಜಾಟ್ ಹೇಳಿದ್ದಾರೆ ಎಂದು ವರದಿಯಾಗಿದೆ.






error: Content is protected !!
Scroll to Top